ಕರುಳ ಬಳ್ಳಿಗಳ ಕಡಿದ
ಕಾಡಿನ ಕುಸುಮಗಳ ದಂಡು..
ಶಹರವೋ..
ಪರಾತಗಟ್ಟಲೆ ಕನಸುಗಳನ್ನು
ಭಕಾಸುರನಂತೆ ನುಂಗಿ
ನಾಚಿಕೆಯಿಲ್ಲದೆ ಹೊಸ ಹಾದರಗಳಿಗೆ
ಸಜ್ಜಾಗಿ ನಿಂತಿದೆ...
ನಮ್ಮದೋ.. ಅವರದೋ..
ಗೊತ್ತೇ ಆಗದ ಭಾಷೆ..
ಮಾಲು, ಮಲ್ಟಿಪ್ಲೆಕ್ಸುಗಳ
ತಳುಕು ಬಳುಕಿನ ತೃಷೆ..
ಬಾರು, ಪಬ್ಬುಗಳ ಮಬ್ಬು ಬೆಳಕಿನ ನಶೆ..
"ವಿಲಾಯತಿಯ ಖಯಾಲಿಯಲ್ಲಿ
ದೇಸಿ ಪರಂಪರೆಯ ಸಾವು"
ಬುದ್ದಿ ಜೀವಿಯೊಬ್ಬ ಆಮದಿನ ಅತ್ತರು ಪೂಸಿ
ಅಬ್ಬರಿಸಿದ ಮಾತು ಅಚ್ಚಾಗಿ ನಿಂತಿದೆ..
ಮುಂದಕೋ.. ಹಿಂದಕೋ..
ಅರ್ಥವಾಗದ ಅಭಿವೃದ್ದಿಯ ಓಟ..
ಮಾನ ಕಾಪಿಡದ ಬಟ್ಟೆ..
ಕಾಲಿ ದುಡಿವವರ ಹೊಟ್ಟೆ..
ಭಲದ ಅಮಲಲಿ ಮಿಂದು..
ಉಳ್ಳವರು ಉನ್ಮತ್ತ ಕುಣಿಯೆ
ಚಲನೆಯ ಮರೆತಂತೆ ಕಾಲ...
ಅರಿವಳಿಕೆ ಹೀರಿ ಮಲಗಿದೆ...
ಶಹರವೋ..
ReplyDeleteಪರಾತಗಟ್ಟಲೆ ಕನಸುಗಳನ್ನು
ಭಕಾಸುರನಂತೆ ನುಂಗಿ
ನಾಚಿಕೆಯಿಲ್ಲದೆ ಹೊಸ ಹಾದರಗಳಿಗೆ
ಸಜ್ಜಾಗಿ ನಿಂತಿದೆ...
wow.. !!!!
ಧನ್ಯವಾದಗಳು ಸಂಧ್ಯಾ ಭಟ್
Deleteನನ್ನ ಬ್ಲಾಗ್ ಗೆ ಭೇಟಿ ಕೊಟ್ಟಿದ್ದಕ್ಕೆ ತುಂಬಾ ಧನ್ಯವಾದಗಳು. ದಿಲಿಪ್ ರವರೆ ನಿಮ್ಮ ಕವನ ನನಗೆ ಇಷ್ಟವಾಯಿತು.
ReplyDeleteChandrashekar Naik....Thanks for your valuable comments
ReplyDelete
ReplyDelete`ಮುಂದಕೋ.. ಹಿಂದಕೋ..
ಅರ್ಥವಾಗದ ಅಭಿವೃದ್ದಿಯ ಓಟ..' ಅರ್ಥಗರ್ಭಿತ ಸಾಲುಗಳ ಸು೦ದರ ಕವನ. ಅಭಿನ೦ದನೆಗಳು ದಿಲಿಪ್ ರವರೆ ನನ್ನ ಬ್ಲಾಗ್ ಗೆ ಭೇಟಿ ಕೊಡಿ.
ಧನ್ಯವಾದಗಳು ಪ್ರಭಾಮಣಿ ಮೇಡಮ್
Delete